Wednesday, September 27, 2023

ಪ್ರಿ ವೆಡ್ಡಿಂಗ್ ಫೋಟೊಶೂಟ್ ದುರಂತ; ಬಿಗಿ ಕ್ರಮಕ್ಕೆ ಪೊಲೀಸರ ನಿರ್ಧಾರ

Follow Us

newsics.com
‌ಮೈಸೂರು: ಮುಡುಕುತೊರೆಯ ಕಾವೇರಿ ನದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೊ ಶೂಟ್ ದುರಂತ ಹಿನ್ನೆಲೆಯಲ್ಲಿ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ.
ಭವಿಷ್ಯದಲ್ಲಿ ಇಂತಹ ದುರಂತ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಹಾಗೂ ಪೊಲೀಸರು ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲೇ ತೆಪ್ಪಗಳ ಮಾಲೀಕರು ಮತ್ತು ಅಂಬಿಗರೊಂದಿಗೆ ಸಭೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ.
ಮುಂದೆ ಇಂತಹ ಘಟನೆ ನಡೆಯದಂತೆ ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕುರಿತು ತೆಪ್ಪದ ಮಾಲೀಕರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎಲ್ಲರಿಗೂ ಇಂತಹ ಅಜಾಗರೂಕತೆಯ ತೆಪ್ಪ ಚಾಲನೆ, ಫೋಟೊ ತೆಗೆಸಿಕೊಳ್ಳುವುದು ಮತ್ತಿತರ ಕೆಲಸಗಳಿಗೆ ಸಹಕರಿಸಬಾರದು. ಲೈಫ್‌ ಜಾಕೆಟ್ ಸೇರಿದಂತೆ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲು ಪೊಲೀಸರು ಮುಂದಾಗಿದ್ದಾರೆ.
ಇಂತಹ ಕೃತ್ಯಗಳನ್ನು ತಡೆಯಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ನೀರಾವರಿ ಸೇರಿದಂತೆ ಇತರೆ ಇಲಾಖೆಗಳಿಗೆ ಪತ್ರ ಬರೆಯಲೂ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ತೆಪ್ಪ ನಡೆಸುತ್ತಿದ್ದ ಕಟ್ಟೇಪುರದ ನಿವಾಸಿ ಮೂಗಪ್ಪ (50) ಎಂಬುವರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿರುವ ಪೊಲೀಸರು ಮೂಗಪ್ಪ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.
ಜಿಲ್ಲೆಯ ಟಿ. ನರಸೀಪುರ ತಾಲೂಕು ತಲಕಾಡಿನ ಮುಡುಕುತೊರೆಯ ಕಾವೇರಿ ನದಿಯಲ್ಲಿ ನ.9 ರಂದು ಪ್ರಿ ವೆಡ್ಡಿಂಗ್ ಫೋಟೊ ಶೂಟ್‌ ವೇಳೆ ತೆಪ್ಪ ಮುಳುಗಿ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ವಧು ಶಶಿಕಲಾ ಹಾಗೂ ವರ ಚಂದ್ರು ಮೃತಪಟ್ಟಿದ್ದರು. ನ.22 ರಂದು ಇವರಿಬ್ಬರ ವಿವಾಹ ಮೈಸೂರಿನಲ್ಲಿ ನಡೆಯಬೇಕಿತ್ತು.

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಪ್ರಿ ವೆಡ್ಡಿಂಗ್ ಶೂಟ್ ದುರಂತಕ್ಕೆ ಹೈಹೀಲ್ಡ್ ಚಪ್ಪಲಿ ಕಾರಣವಂತೆ…!

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ದುರಂತ; 6 ಮಂದಿ ವಿರುದ್ಧ ಕೇಸ್

ಖ್ಯಾತ ಪತ್ರಕರ್ತ, ಸಾಹಿತಿ ರವಿ ಬೆಳಗೆರೆ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!