Monday, October 3, 2022

ಕನ್ನಡ ಅನುಷ್ಠಾನಕ್ಕೆ ಬಲ‌ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ

Follow Us

newsics.com
ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್ ವಿಧೇಯಕವನ್ನು ಮಂಡಿಸಿದರು. ಆಡಳಿತ ಕನ್ನಡ ಜಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದು ಸೇರಿದಂತೆ ಶಿಸ್ತು ಕ್ರಮಗಳ ಅನುಷ್ಠಾನಕ್ಕಾಗಿ ವಿವಿಧ ಹಂತಗಳಲ್ಲಿ ಜಾರಿ ಪ್ರಾಧಿಕಾರ ರಚನೆ ಮಾಡುವುದಕ್ಕೆ ಈ ವಿಧೇಯಕದ ಮೂಲಕ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕೈಗಾರಿಕೆಗಳು, ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಕಾಯಿದೆಯ ಮೇಲ್ವಿಚಾರಣೆಗೂ ಈ ವಿಧೇಯಕ ಬಲ ನೀಡಲಿದೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಉನ್ನತ, ತಾಂತ್ರಿಕ ಹಾಗೂ ವೃತ್ತಿ ಶಿಕ್ಷಣದಲ್ಲಿ ಮೀಸಲು ಸೌಲಭ್ಯ ಸಿಗಲಿದೆ.

ಕನ್ನಡ ಅನುಷ್ಠಾನ ಉಲ್ಲಂಘನೆ ಮಾಡಿದ ವ್ಯಕ್ತಿ, ಸಂಘ- ಸಂಸ್ಥೆಗಳಿಗೆ ದಂಡ ವಿಧಿಸುವ ಉಪಬಂಧವನ್ನು ಈ ಕಾಯಿದೆಯ ಮೂಲಕ ಪರಿಚಯಿಸಲಾಗುತ್ತಿದೆ. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ ಖಾಸಗಿ ವ್ಯಕ್ತಿ, ಕಾರ್ಖಾನೆ, ಸಂಘಟನೆಗಳಿಗೆ 5000 ರೂ, ಎರಡನೇ ಬಾರಿಗೆ 10,000 ರೂ. ಹಾಗೂ ಮೂರನೇ ಬಾರಿಗೆ ತಪ್ಪೆಸಗಿದವರಿಗೆ 20,000 ರೂ.ವರೆಗೆ ದಂಡ ವಿಧಿಸುವ ಅಧಿಕಾರವನ್ನು ವಿವಿಧ ಹಂತದಲ್ಲಿ ಜಾರಿಗೆ ತರುವ ಅಧಿಕಾರವನ್ಜು ಪ್ರಾಧಿಕಾರಕ್ಕೆ ನೀಡಲಾಗುತ್ತದೆ ಎಂದು ಸುನಿಲ್ ಕುಮಾರ್ ತಿಳಿಸಿದರು.

ನಾಳೆ ಮಲ್ಟಿಪ್ಲೆಕ್ಸ್‌, ಥಿಯೇಟರ್‌ಗಳಲ್ಲಿ 75 ರೂ.ಗೆ ಸಿನಿಮಾ ವೀಕ್ಷಿಸಿ

ಸೆ.27ಕ್ಕೆ ಶಿಂಜೋ ಅಬೆ ಅಂತ್ಯಕ್ರಿಯೆ; ಜಪಾನ್‌ಗೆ ತೆರಳಲಿರುವ ಪ್ರಧಾನಿ ಮೋದಿ

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಮಲೇರಿಯಾ ಹೆಚ್ಚಳ; ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಚಿಂತನೆ

ಇರಾನ್‌ನಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು; ಇಂಟರ್ನೆಟ್, ಸಾಮಾಜಿಕ ಮಾಧ್ಯಮಗಳ ಸ್ಥಗಿತ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!