newsics.com
ಶೃಂಗೇರಿ(ಚಿಕ್ಕಮಗಳೂರು): ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ (ಅ.8) ಶೃಂಗೇರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜನರ ಮೇಲಷ್ಟೇ ಅಲ್ಲ, ಜಾನುವಾರುಗಳಿಗೂ ನಿರ್ಬಂಧ ಹೇರಲಾಗಿದೆ.
ಜಿಲ್ಲಾಡಳಿತದ ಈ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಜನಸಾಮಾನ್ಯರ ಓಡಾಟದ ಮೇಲೆ ನಿರ್ಬಂಧ ಹೇರಿರುವ ಜಿಲ್ಲಾಡಳಿತ, ಇದೀಗ ದನಕರುಗಳು, ಕೋಳಿ, ಹಂದಿ ಮತ್ತು ಇತರ ಸಾಕುಪ್ರಾಣಿಗಳಿಗೂ ನಿರ್ಬಂಧ ಹೇರಿದೆ.
ಮನೆಯಲ್ಲೇ ದನಕರುಗಳು, ಕೋಳಿ, ಹಂದಿ ಕೂಡಿ ಹಾಕುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾಕುಪ್ರಾಣಿಗಳು ಸಿಕ್ಕರೆ ವಶಕ್ಕೆ ಪಡೆಯುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ.
ಶುಕ್ರವಾರ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವುದರಿಂದ ಅಂದು ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಕ್ಟೋಬರ್ 8ರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಆಯೋಜನೆಗೊಂಡಿದೆ.
ಡ್ರಗ್ಸ್ ಕೇಸ್: ಆರ್ಯನ್ ಖಾನ್ ಸೇರಿ 8 ಮಂದಿಗೆ 14 ದಿನ ನ್ಯಾಯಾಂಗ ಬಂಧನ
ಜಾಮೂನ್ ಜತೆ ಸತ್ತ ಜಿರಳೆ ನೀಡಿದ್ದ ಬೆಂಗಳೂರಿನ ಹೋಟೆಲ್: 55 ಸಾವಿರ ರೂ. ಪಾವತಿಗೆ ಕೋರ್ಟ್ ಸೂಚನೆ