newsics.com
ಬೆಂಗಳೂರು: ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸಿದ್ದತೆ ನಡೆಸಿರುವ ಸರ್ಕಾರ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.
ಸರ್ಕಾರಿ ಶಾಲೆ, ಅನುದಾನ ಸಹಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಇತರ ಸಿಬ್ಬಂದಿಗೆ ಆದ್ಯತೆಯ ನೆಲೆಯಲ್ಲಿ ಕೊರೋನಾ ಲಸಿಕೆ ನೀಡುವುದಾಗಿ ಪ್ರಕಟಿಸಿದೆ.
ಅದೇ ರೀತಿ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರು ಮತ್ತು ಅವರ ಕುಟಂಬದ ಇತರ ಸದಸ್ಯರಿಗೂ ಈ ಅವಕಾಶ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ. ಅಧಿಸೂಚನೆ ಹೊರಡಿಸಿದೆ.
ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡದಿರಲು ಈ ಕ್ರಮಕ್ಕೆ ಮುಂದಾಗಿದೆ.