Tuesday, April 13, 2021

ದೆಹಲಿ ಕೋರ್ಟಲ್ಲಿ ಕನ್ನಡಿಗರಿಗೆ ಮುನ್ನಡೆಬೆಂಗಳೂರು/ನವದೆಹಲಿ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಶೇಕಡಾ 25 ರಷ್ಟು ಪ್ರಾತಿನಿಧ್ಯ ಕಲ್ಪಿಸಲು ಜಾರಿಗೆ ತಂದಿರುವ ಕರ್ನಾಟಕ ಡೊಮಿಸೈಲ್ ರಿಸರ್ವೇಷನ್ ಬಿಲ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜುಲೈ 3) ವಜಾಗೊಳಿಸಿದೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ(NLSIU)ಯಲ್ಲಿ ನೂತನವಾಗಿ ಜಾರಿಗೆ ತಂದಿರುವ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡಲು ಕರ್ನಾಟಕ ಸರ್ಕಾರ ವಿಧೇಯಕ ಜಾರಿಗೆ ತಂದಿತ್ತು. ಮೇನಲ್ಲಿ ರಾಜ್ಯಪಾಲರ ಅಂಗೀಕಾರ ಪಡೆದಿತ್ತು. ಆದರೆ, ಈ ರಿಸರ್ವೇಷನ್ ಬಿಲ್ ವಿರುದ್ಧ ಶುಭಮ್ ಕುಮಾರ್ ಝಾ ಎಂಬುವರು ದಾವೆ ಹೂಡಿದ್ದರು. ಆದರೆ, ದಾವೆ ನ್ಯಾಯಾಲಯದ ಸರಹದ್ದು ಮೀರಿದ್ದಾಗಿದೆ ಎಂದು ಅಭಿಪ್ರಾಯಪಟ್ಟ ದೆಹಲಿ ಉಚ್ಛ ನ್ಯಾಯಾಲಯ ಅರ್ಜಿದಾರರ ಮನವಿಯನ್ನು ವಜಾಗೊಳಿಸಿದೆ.
ಕರ್ನಾಟಕದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಲ್ಲಿ ಸಮರ್ಥವಾಗಿ ವಾದ ಮಂಡಿಸಿದ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ವಾದಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!