newsics.com
ಬೆಂಗಳೂರು: ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ
ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯದ 16 ಪದವಿ ಕಾಲೇಜುಗಳಲ್ಲಿ 19 ಮನ ಶಾಸ್ತ್ರ ಪ್ರಾಧ್ಯಾಪಕರ ಹುದ್ದೆಗಳನ್ನು ಸಸ್ಯ ಶಾಸ್ತ್ರ ಮತ್ತು ಪ್ರಾಣಿ ಶಾಸ್ತ್ರ ಪ್ರಾಧ್ಯಾಪಕ ಹುದ್ದೆಗಳಿಗೆ ಪರಿವರ್ತಿಸಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ನ್ಯಾಯಮಂಡಳಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರ ಬಹಳ ದಿನಗಳ ಬಳಿಕ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿತ್ತು.