newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಕ್ರಿಯವಾಗಿದ್ದ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದಾರೆ. ಈ ಜಾಲದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಆರೋಪಿ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನೆರೆಯ ರಾಜ್ಯಗಳಿಂದ ಮುಗ್ಧ ಯುವತಿಯರನ್ನು ನಗರಕ್ಕೆ ಕರೆ ತಂದು ಅವರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ಆರೋಪಿ ದೂಡುತ್ತಿದ್ದ ಎಂದು ಆರೋಪಿಸಲಾಗಿದೆ.