ಮಂಗಳೂರು: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಹಲವು ಮುಸ್ಲಿಂ ಸಂಘಟನೆಗಳ ಆಶ್ರಯದಲ್ಲಿ ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸುಮಾರು ಒಂದು ಲಕ್ಷ ಮಂದಿ ಇದರಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಂಗಳೂರು ನಗರದ ಹೊರ ವಲಯದ ಅಡ್ಯಾರು ಕಣ್ಣೂರು ಎಂಬಲ್ಲಿ ಸಮಾವೇಶಕ್ಕೆ ಎಲ್ಲ ಸಿದ್ದತೆ ನಡೆಸಲಾಗಿದೆ. ಕೇಂದ್ರ ಅರೆ ಸೇನಾ ಪಡೆ ಸೇರಿದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.