newsics.com
ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಕಲಬುರಗಿಯ ಮೂರನೇ ಜೆ ಎಂ ಎಫ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ ನೇಸರಗಿ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದ ಪ್ರಭು ಹಾಗೂ ಇದಕ್ಕೆ ಹಣ ನೀಡಿ ಸಹಕರಿಸಿದ ಶರಣಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ತನಿಖೆ ನಡೆಸಿದ ವೇಳೆ ತಂದೆ-ಮಗ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು.