newsics.com
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಹಿಂದೆ ಪ್ರಕಟಿಸಿದ ಫಲಿತಾಂಶ ಇಷ್ಟವಿಲ್ಲದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೋನಾ ಮೂರನೇ ಅಲೆ ಆತಂಕದ ನಡುವೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ಒಟ್ಟು 5,546 ಕಾಲೇಜುಗಳಿಂದ
18,414 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಆ.17ರೊಳಗೆ ಸಿದ್ಧತೆ ಪೂರ್ಣಗೊಳಿಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ನಿಷೇಧ -ಕೇಂದ್ರ ಸರ್ಕಾರ