newsics.com
ಬೆಂಗಳೂರು: ಚುನಾವಣೆ ಘೋಷಣೆಯಾಗದಿದ್ದರೂ ಬಿಬಿಎಂಪಿಯ 198 ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಸೋಮವಾರ ನಗರಾಭಿವೃದ್ಧಿ ಇಲಾಖೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದೆ.
ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನ ನಡೆಸಿದೆ. ಪಾಲಿಕೆಯ ಈಗಿರುವ 198 ವಾರ್ಡ್‌ಗಳನ್ನು 225ಕ್ಕೆ ಹೆಚ್ಚಿಸಲು ಮುಂದಾಗಿದೆ. ಬಿಬಿಎಂಪಿ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಲು ಸರ್ಕಾರ ಬಯಸಿದೆ. ಒಂದು ವೇಳೆ 225 ವಾರ್ಡ್‌ಗಳು ಆದರೆ ಈಗ ಪ್ರಕಟಿಸಿರುವ ಮೀಸಲಾತಿ ಪಟ್ಟಿಗೆ ಯಾವುದೇ ಬೆಲೆ ಇಲ್ಲವಾಗುತ್ತದೆ. ಆಗ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸಬೇಕಾಗುತ್ತದೆ.
ಬಿಬಿಎಂಪಿ ಕಾಯ್ದೆಗೆ ತಿದ್ದುಪಡಿ ತಂದರೆ ಈಗಿರುವ ವಲಯಗಳ ಸಂಖ್ಯೆ 8 ರಿಂದ 12ಕ್ಕೆ ಏರಿಕೆಯಾಗಲಿದೆ. ಮೇಯರ್ ಮತ್ತು ಉಪ ಮೇಯರ್ ಅವಧಿ 12 ರಿಂದ 30 ತಿಂಗಳಿಗೆ ಏರಿಕೆಯಾಗಲಿದೆ.
ಬಿಬಿಎಂಪಿಯ ಕೌನ್ಸಿಲ್ ಅವಧಿ ಸೆ.10ಕ್ಕೆ ಅಂತ್ಯಗೊಂಡಿದೆ. ಸರ್ಕಾರ 1990ನೇ ಬ್ಯಾಚ್ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರನ್ನು ಬಿಬಿಎಂಪಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿದೆ.
ಬಿಬಿಎಂಪಿ ಚುನಾವಣೆ ನಡೆದು ಹೊಸ ಮೇಯರ್, ಉಪ ಮೇಯರ್ ಆಯ್ಕೆಯಾಗುವವರೆಗೆ ಆಡಳಿತಾಧಿಕಾರಿಯೇ ಪಾಲಿಕೆಯ ಆಡಳಿತ ನೋಡಿಕೊಳ್ಳಲಿದ್ದಾರೆ. ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಹೆಚ್ಚಿನ ವಿವರಗಳಿಗೆ ಈ ಲಿಂಕ್ ಕ್ಲಿಕ್ಕಿಸಿ: 966
ಬಿಬಿಎಂಪಿಯ 198 ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟ
Follow Us