Thursday, May 26, 2022

ಪಿಯುಸಿ ಪರೀಕ್ಷೆ: ತಾತ್ಕಾಲಿಕ‌ ವೇಳಾಪಟ್ಟಿ ಪ್ರಕಟ

Follow Us

newsics.com

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 16-04-2022 ರಿಂದ 04-05-2022ರವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು 18-01-2022ರಿಂದ 01-02-2022ರವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ಗೆ ಕಳುಹಿಸಬಹುದು.

2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವಸಿದ್ಧತಾ ಪರೀಕ್ಷೆ ಫೆಬ್ರವರಿ 17ರಿಂದ ಆರಂಭವಾಗಲಿವೆ.

ಪದವಿಪೂರ್ವ ಶಿಕ್ಷಣ ಇಲಾಖೆ ಈ ಮಾಹಿತಿ ನೀಡಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು 17-02-2022 ರಿಂದ 25-03-2022ರವರೆಗೆ ನಡೆಯಲಿವೆ. ಪೂರ್ವ ಸಿದ್ಧತಾ ಪರೀಕ್ಷೆಗಳು 14-03-2022 ರಿಂದ 25-03-2022ರವರೆಗೆ ನಡೆಯಲಿವೆ.

  • ಭಾಷಾ ವಿಷಯಗಳಲ್ಲಿ 2020-21ನೇ ಸಾಲಿನಲ್ಲಿ ಕಡಿತಗೊಳಿಸಲಾಗಿದ್ದು, ಶೆ.30ರಷ್ಟು ಪಠ್ಯಕ್ರಮಗಳನ್ನು 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಭಾಷಾ ವಿಷಯಗಳಲ್ಲಿ ಶೇ.30ರಷ್ಟು ಪಠ್ಯಕ್ರಮಗಳನ್ನು ಕಡಿತಗೊಳಿಸಿದ್ದು, ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು.
  • 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲ. ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳು ನಡೆಯಲಿವೆ.
  • ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವಾಗ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸಲು ಅವಕಾಶ ಕಲ್ಪಿಸಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಆಯಾ ಜಿಲ್ಲೆಯ ಉಪ ನಿರ್ದೇಶಕರ ನೇತೃತ್ವದಲ್ಲಿ ಸಿದ್ಧಪಡಿಸಿ, 28-03-2022 ರಿಂದ 13-04-2022ರವರೆಗೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.

ಆತ್ಮಗಳ ಜೊತೆ ಮಾತಾಡುತ್ತೇನೆಂದು ಕಾಣೆಯಾಗಿದ್ದ ಬಾಲಕಿ ಪತ್ತೆ

ಕಾರು‌ ಕೆರೆಗೆ ಉರುಳಿ ಒಂದೇ‌ ಕುಟುಂಬದ ನಾಲ್ಚರ ಸಾವು

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!