♦ ಆಗಸ್ಟ್ನಲ್ಲಿ ಪೂರಕ ಪರೀಕ್ಷೆ ಸಾಧ್ಯತೆ
ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ತಮಗೆ ಬಂದಿರುವ ಅಂಕದ ಬಗ್ಗೆ ಅನುಮಾನಗಳಿದ್ದಲ್ಲಿ ಮರು ಮೌಲ್ಯಮಾಪನಕ್ಕೆ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಫಲಿತಾಂಶದಿಂದ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಪಡೆಯಲು, ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಹಾಗೂ ಅಂಕಗಳ ಮರು ಎಣಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆಗೆ ಹಾಜರಾಗಿದ್ದ 6,75,277 ವಿದ್ಯಾರ್ಥಿಗಳ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಂದಿನ ತಿಂಗಳು ಅಂದರೆ ಆಗಸ್ಟ್ನಲ್ಲಿ ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಜುಲೈ ಕೊನೇ ವಾರದಲ್ಲಿ ವೇಳಾಪಟ್ಟಿ ಪ್ರಕಟವಾಗಲಿದೆ.
ದ್ವಿತೀಯ ಪಿಯುಸಿ; ಶೇ.61.38 ರಿಸಲ್ಟ್, ಉಡುಪಿ, ದ.ಕ. ಫಸ್ಟ್, ವಿಜಯಪುರ ಲಾಸ್ಟ್
ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಿಸಿಕೊಳ್ಳಲು ಕಾಲೇಜಿನ ಪ್ರಾಂಶುಪಾಲರು ಅನುತ್ತೀರ್ಣ ಒಎಂಆರ್ ಅರ್ಜಿಗಳಿಗಾಗಿ ಕಾಯಬೇಕಾದ ಅವಶ್ಯಕತೆ ಇಲ್ಲ. ಫಲಿತಾಂಶ ಪಟ್ಟಿ ಆಧಾರದ ಮೇರೆಗೆ ಅನುತ್ತೀರ್ಣ ವಿಷಯಗಳಿಗೆ ನಿಯಮಾನುಸಾರ ಪರೀಕ್ಷಾ ಶುಲ್ಕ ಕಟ್ಟಿಸಿಕೊಳ್ಳಬೇಕಿದೆ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಆಗಸ್ಟ್ 3ರೊಳಗೆ ಕಳುಹಿಸಬೇಕಿದೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಜು.16ರಿಂದ ಜು.30ರವರೆಗೆ ಅವಕಾಶ ನೀಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿಪಡಿಸಲಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಆ. 3ರಿಂದ 7ರವರೆಗೆ ಅವಕಾಶ ನೀಡಲಾಗಿದೆ. ಮರುಮೌಲ್ಯಮಾಪನಕ್ಕೆ ಮತ್ತು ಮರು ಏಣಿಕೆಗಾಗಿ ಆ.4ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದು. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ.
ನಾಳೆ ಸಿಬಿಎಸ್ಇ ಹತ್ತನೆ ತರಗತಿ ಪರೀಕ್ಷಾ ಫಲಿತಾಂಶ