Saturday, April 17, 2021

ಕ್ವಾರಂಟೈನ್ ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆ

ಬಾಗಲಕೋಟೆ: ಮಹಾರಾಷ್ಟ್ರಕ್ಕೆ ದುಡಿಯಲು ಹೋಗಿದ್ದ ಯಾದಗಿರಿ ಮೂಲದ ವ್ಯಕ್ತಿಯೊಬ್ಬ ಕ್ವಾರಂಟೈನ್ ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಮುಧೋಳ ತಾಲೂಕಿನ ಚಿಕ್ಕೂರ ಗ್ರಾಮದ 35 ವರ್ಷದ ತುಕಾರಾಮ ಪವಾರ್ ಎಂಬಾತ ಕ್ವಾರಂಟೈನ್ ಗೆ ಹೆದರಿ ಮೇ 16ರಂದು ವಿಷ ಸೇವಿಸಿದ್ದ. ಆತ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾನೆ.
ತುಕಾರಾಮ್ ಮಹಾರಾಷ್ಟ್ರದ ರತ್ನಗಿರಿಗೆ ದುಡಿಯಲು ಹೋಗಿ ಮೇ 15ರಂದು ರಾತ್ರಿ ಲಾರಿ ಮೂಲಕ ಚಿಕ್ಕೂರ ಗ್ರಾಮಕ್ಕೆ ಬಂದಿದ್ದ. ಈ ವಿಷಯ ಆರೋಗ್ಯ ಇಲಾಖೆಗೆ ಗೊತ್ತಾಗುತ್ತಿದ್ದಂತೆ ಮೇ 16ರಂದು ಆಶಾ ಕಾರ್ಯಕರ್ತೆ ಹಾಗೂ ಸಿಬ್ಬಂದಿ ತುಕಾರಾಮ್ ಪವಾರ್ ಮನೆಗೆ ಭೇಟಿ ನೀಡಿ ತಪಾಸಣೆ ಮಾಡಿ ಕ್ವಾರಂಟೈನ್ ನಲ್ಲಿರುವಂತೆ ಹೇಳಿದ್ದಾರೆ. ಕ್ವಾರಂಟೈನ್ ನಲ್ಲಿಡುತ್ತಾರೆ ಎಂದು ಹೆದರಿ ತುಕಾರಾಮ್ ತೋಟದಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.
ತುಕಾರಾಮ ಮೂಲತಃ ಯಾದಗಿರಿ ಜಿಲ್ಲೆಯವನಾಗಿದ್ದು, ಹೆಂಡತಿ ಮಕ್ಕಳೊಂದಿಗೆ ಮುಧೋಳ ತಾಲೂಕಿನ ಚಿಕ್ಕೂರ ಗ್ರಾಮಕ್ಕೆ ವಲಸೆ ಬಂದಿದ್ದ. ಚಿಕ್ಕೂರ ಗ್ರಾಮದಲ್ಲಿ ತೋಟವೊಂದನ್ನು ಪಾಲಿನಲ್ಲಿ ಉಳುಮೆ ಮಾಡಿ ಜೀವನ ಸಾಗಿಸುತ್ತಿದ್ದ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!