Wednesday, October 5, 2022

ಆರ್ ಆರ್ ನಗರ, ಶಿರಾ ಉಪ ಚುನಾವಣೆ: ಮತ ಎಣಿಕೆ ಆರಂಭ

Follow Us

Newsics.com

ಬೆಂಗಳೂರು:  ರಾಜ್ಯ ರಾಜಕಾರಣದಲ್ಲಿ ರಾಜಕೀಯ ಬದಲಾವಣೆಗೆ ನಾಂದಿ ಹಾಡಲಿರುವ  ಆರ್ ಆರ್ ನಗರ ಮತ್ತು ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಇದೀಗ ಅಂಚೆ ಮತಗಳ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಆರ್ ನಗರದಲ್ಲಿ ಕಾಂಗ್ರೆಸ್ ಕುಸುಮಾ ಅವರನ್ನು ಕಣಕ್ಕಿಳಿಸಿದೆ.  ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಮತ್ತು ಜೆಡಿಎಸ್  ಕೃಷ್ಣಮೂರ್ತಿ  ಸ್ಪರ್ಧಿಸುತ್ತಿದ್ದಾರೆ.

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ.

ಶಿರಾದಲ್ಲಿ ಜೆಡಿಎಸ್ ನಿಂದ ಅಮ್ಮಾಜಮ್ಮ, ಬಿಜೆಪಿಯಿಂದ ಡಾ. ರಾಜೇಶ್ ಗೌಡ ಮತ್ತು ಕಾಂಗ್ರೆಸ್  ಟಿ. ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ.

ಇದೀಗ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ  ಅಂಚೆಮತಗಳ ಎಣಿಕೆ ನಡೆಯುತ್ತಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ ಯಡಿಯೂರಪ್ಪ ಅವರ  ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ. ಡಿ ಕೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!