Newsics.com
ಮಂಗಳೂರು: ನಗರದ ಶ್ರೀನಿವಾಸ ಫಾರ್ಮಸಿ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳ ಜತೆ ಅನುಚಿತ ವರ್ತನೆ ಮತ್ತು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಹಿರಿಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಈ ಮಾಹಿತಿ ನೀಡಿದ್ದಾರೆ.
ಆರೋಪಿಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಭಾರತೀಯ ಅಪರಾಧ ದಂಡ ಸಂಹಿತೆಯ ಅಢಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಿರಿಯ ವಿದ್ಯಾರ್ಥಿಗಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ಶಿಕ್ಷಣ ಸಂಸ್ಥೆಗಳು ಕ್ರಮ ತೆಗೆದುಕೊಳ್ಳಬೇಕು. ಇದಕ್ಕೆ ವಿಫಲರಾದರೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕೂಡ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Z