ಬೆಂಗಳೂರು: ಚಂದನವನದಲ್ಲಿ ಸಂಚಲನ ಮೂಡಿಸಿರುವ ಮಾದಕ ದ್ರವ್ಯ ಜಾಲದ ತನಿಖೆ ಮುಂದುವರಿದಿದೆ. ಇದೇ ವೇಳೆ ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ರಾಗಿಣಿ ಮತ್ತು ಸಂಜನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಳ್ಳಲಿದೆ. ಮಧ್ಯಾಹ್ನ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ವೀಡಿಯೊ ಕಾನ್ಪರೆನ್ಸ್ ಮೂಲಕ ಇಬ್ಬರು ಆರೋಪಿಗಳನ್ನು ಹಾಜರುಪಡಿಸಲು ಸಿಸಿಬಿ ನಿರ್ಧರಿಸಿದೆ. . ಭಾನುವಾರ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದ್ದು, ಮಹತ್ವದ ಮಾಹಿತಿ ಸಂಗ್ರಹಿಸಲಾಗಿದೆ.
ಮಾದಕ ದ್ರವ್ಯ ಜಾಲದಲ್ಲಿ ಕಿರು ತೆರೆಯ ನಟ ನಟಿಯರ ಹೆಸರು ಕೂಡ ಕೇಳಿ ಬಂದಿದ್ದು, ಈ ನಿಟ್ಟಿನಲ್ಲಿ ಕೂಡ ತನಿಖೆ ನಡೆಯುವ ಸಾಧ್ಯತೆಗಳಿವೆ