ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಸೆಪ್ಟೆಂಬರ್ 19 ರಂದು ವಿಚಾರಣೆ ನಡೆಯಲಿದೆ.
ಪ್ರಕರಣದಲ್ಲಿ ಸಮರ್ಥವಾದ ಮಂಡನೆಗೆ ಸರ್ಕಾರ ಇಬ್ಬರು ವಿಶೇಷ ಅಭಿಯೋಜಕರನ್ನು ಈಗಾಗಲೇ ನೇಮಕ ಮಾಡಿದೆ. ತಮ್ಮಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಅಭಿಯೋಜಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ.
ಮುಂದಿನ ವಿಚಾರಣೆ ಸೆಪ್ಟೆಂಬರ್ 19 ರಂದು ನಡೆಯಲಿದೆ. ಅಲ್ಲಿಯ ತನಕ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.
ಇದೇ ವೇಳೆ ಇನ್ನೊಬ್ಬ ನಟಿ ಸಂಜನಾ ಅವರ ವೈದ್ಯಕೀಯ ಪರೀಕ್ಷೆ ಕೆ . ಸಿ. ಜನರಲ್ ಆಸ್ಪತ್ರೆಯಲ್ಲಿ ಇಂದು ನಡೆಯಲಿದೆ. ಅವರನ್ನು ಈಗಾಗಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂಜೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು