ಬೆಂಗಳೂರು: ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಸೆಪ್ಟೆಂಬರ್ 14ಕ್ಕೆ ವಿಚಾರಣೆ ನಡೆಯಲಿದೆ. ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.
ಇದೇ ವೇಳೆ ಇಂದು ಸಂಜೆ ರಾಗಿಣಿ ಅವರ ಸಿಸಿಬಿ ಕಸ್ಟಡಿ ಅವಧಿ ಕೊನೆಗೊಳ್ಳಲಿದೆ. ಸಂಜೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಇದೀಗ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಖುದ್ದು ರಾಗಿಣಿ ಅವರ ವಿಚಾರಣೆ ನಡೆಸುತ್ತಿದ್ದಾರೆ. ರಾಗಿಣಿ ಇದುವರೆಗೆ ಪೊಲೀಸರ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿಲ್ಲ.