newsics.com
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ ಈಗ ವಿಚಾರಣಾಧೀನ ಕೈದಿ ನಂ.6604!
ನ್ಯಾಯಾಂಗ ವಶದಲ್ಲಿರುವ ರಾಗಿಣಿ ದ್ವಿವೇದಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ವಿಚಾರಣಾಧೀನ ಕೈದಿ ಸಂಖ್ಯೆ 6604 ನೀಡಲಾಗಿದೆ.
ಡ್ರಗ್ಸ್ ಪ್ರಕರಣದಲ್ಲಿ 6 ದಿನಗಳ ಕಾಲ ಸಿಸಿಬಿ ವಶದಲ್ಲಿದ್ದ ರಾಗಿಣಿ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಾಗಿತ್ತು. ಆದರೆ ಸೋಮವಾರ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಯಿತು.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ರಾಗಿಣಿ ಹಾಗೂ ಇತರೆ ಮೂವರನ್ನು ಒಂದೇ ವಾಹನದಲ್ಲಿ ಕರೆತರಲಾಗಿದ್ದು, ಈ ವೇಳೆ ರಾಗಿಣಿ ತಮ್ಮ ಹಾಗೂ ತಂದೆಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.
ರಾಗಿಣಿ ಜೈಲು ಸೇರಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಲ್ಲಿ ಪೊಲೀಸ್ ಬಿಗಿಭದ್ರತೆ ಹೆಚ್ಚಿಸಲಾಗಿದೆ. ಜೈಲಿನಲ್ಲಿ ರಾಗಿಣಿ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.