newsics.com
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ.
ನಟಿ ರಾಗಿಣಿ ಹಾಗೂ ಸಂಜನಾ ಅವರ ಸಿಸಿಬಿ ಕಸ್ಟಡಿ ಸೋಮವಾರ (ಸೆ.14) ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರುಪಡಿಸುವುದಕ್ಕೂ ಮುನ್ನ ಇಬ್ಬರು ನಟಿಯರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಕೊರೊನಾ ಟೆಸ್ಟ್ ಕೂಡ ಮಾಡಲಾಗಿದ್ದು, ಇಬ್ಬರ ವರದಿಯಲ್ಲೂ ನೆಗೆಟಿವ್ ಬಂದಿದೆ.
ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
ವೈದ್ಯಕೀಯ ತಪಾಸಣೆ ಬಳಿಕ ಇಬ್ಬರು ನಟಿಯರನ್ನು ಸಿಸಿಬಿ ಅಧಿಕಾರಿಗಳು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
ಈ ಮಧ್ಯೆ, ನ್ಯಾಯಾಲಯ ನಟಿ ರಾಗಿಣಿ ಸೇರಿ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.16 ಕ್ಕೆ ಮುಂದೂಡಿದೆ.
ಸೆ.21ರಿಂದ ಶಾಲಾ-ಕಾಲೇಜು ಆರಂಭ; ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ನೆಲಕ್ಕೆ ಬಡಿದು ಮೂರು ವರ್ಷದ ಮಗಳನ್ನೇ ಕೊಂದ ತಂದೆ!