ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರಿಕೆ ಸಾಧ್ಯತೆ

newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಒಳನಾಡಿನಲ್ಲಿ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣ ಉಂಟಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಬೆಂಗಳೂರು ನಗರ, ಗ್ರಾಮಾಂತರ, ಬಳ್ಳಾರಿ, ಯಾದಗಿರಿ, ಶಿವಮೊಗ್ಗ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಇದರ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯೂ‌ ಇದೆ. … Continue reading ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರಿಕೆ ಸಾಧ್ಯತೆ