Monday, August 8, 2022

ಉಡುಪಿಯಲ್ಲಿ ಮಳೆ ಅಬ್ಬರ, 700 ಮನೆ ಮುಳುಗಡೆ, 2500 ಸಂತ್ರಸ್ತರ ರಕ್ಷಣೆ

Follow Us

newsics.com
ಉಡುಪಿ: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, 24 ಗಂಟೆಗಳಲ್ಲಿ 700 ಮನೆಗಳು ಮುಳುಗಡೆಯಾಗಿದೆ. 2500 ಸಂತ್ರಸ್ತರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಹಲವು ಕಡೆ ಮಳೆಯಿಂದಾಗಿ ನದಿ, ಹಳ್ಳ ತೊರೆಗಳು ಉಕ್ಕಿ ಹರಿಯುತ್ತಿವೆ. ಅನೇಕ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳು ಮುಳುಗಡೆಗೊಂಡು ರಸ್ತೆ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರದಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಜಲಾವೃತವಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 700 ಮನೆಗಳು ಮುಳುಗಡೆಯಾಗಿದೆ. ಕೃಷ್ಣ ಮಠ, ಪುತ್ತಿಗೆ ಮಠಕ್ಕೆ ನೀರು ನುಗ್ಗಿದೆ. 2500 ಸಂತ್ರಸ್ತರ ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!