ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕು ರಾಂಪುರ ಮಠದ ಹಾಲಸ್ವಾಮಿ ಅವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಭಕ್ತರು ಆಸ್ಪತ್ರೆಗೆ ಹೋಗುವಂತೆ ಮನವಿ ಮಾಡಿದ್ದರೂ ಆಸ್ಪತ್ರೆಗೆ ಹೋಗಲು ಸ್ವಾಮೀಜಿ ನಿರಾಕರಿಸಿದ್ದರು. ಆದರೆ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾರಕ ಕೊರೋನಾಕ್ಕೆ ಮತ್ತೊಬ್ಬಎಎಸ್ಐ ಬಲಿ