newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಶಾಲಾ ಬಸ್ ಚಾಲಕನೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಬೆಂಗಳೂರಿನ ನಾಗರಭಾವಿ ಯಲ್ಲಿ ಈ ಪ್ರಕರಣ ವರದಿಯಾಗಿದೆ. ಬಸ್ ಗೆ ಕಾಯುತ್ತಿದ್ದ ಮಹಿಳೆಯೊಬ್ಬರು ಅದೇ ದಾರಿಯಲ್ಲಿ ಬಂದ ಶಾಲಾ ಬಸ್ ಹತ್ತಿದ್ದರಂತೆ. ಸ್ವಲ್ಪ ದೂರ ಹೋದ ಬಳಿಕ ಬಸ್ ಚಾಲಕ ಅತ್ಯಾಚಾರ ಎಸಗಿ ಬಸ್ ನಿಂದ ತಳ್ಳಿಹಾಕಿದ್ದಾನೆ ಎಂದು ದೂರು ನೀಡಲಾಗಿದೆ.
ಈ ಸಂಬಂಧ ಬಸ್ ಚಾಲಕ ಶಿವಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.