newsics.com
ಬೆಂಗಳೂರು: ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತನ್ನ ಪರಿಶೀಲನಾ ಅರ್ಜಿಯಲ್ಲಿ ಹೇಳಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕಾವೇರಿ ನೀರು ಬಿಡುಗಡೆ ಆದೇಶಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಯಿತು. ಪರಿಸ್ಥಿತಿ ಅವಲೋಕಿಸಿದ ನಂತರ ಸುಪ್ರೀಂ ಕೋರ್ಟಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು. ನಿನ್ನೆ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶರು ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿದ್ದೇವೆ ಮತ್ತು ಸಲಹೆಗಳನ್ನು ತೆಗೆದುಕೊಂಡಿದ್ದೇವೆ ಮತ್ತು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.