Saturday, November 26, 2022

ರಾಜ್ಯದಲ್ಲಿ ಜೂ. 21ರಿಂದ ಮತ್ತಷ್ಟು ಸಡಿಲಿಕೆ: 13 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಜೂ. 21ರಿಂದ ಮತ್ತಷ್ಟು ಸಡಿಲಿಕೆ ನೀಡಿದೆ.

ಬಸ್, ಮೆಟ್ರೋಗೆ ಶೇ 50ರ ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೋಟೆಲ್ ನಲ್ಲೇ ಕುಳಿತು ಆಹಾರ ಸೇವನೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. 16 ಜಿಲ್ಲೆಗಳಲ್ಲಿ ಲಾಕ್’ಡೌನ್ ಸಡಿಲಿಕೆ ಮಾಡಲಾಗಿದೆ. 13 ಜಿಲ್ಲೆಗಳಲ್ಲಿ ಲಾಕ್’ಡೌನ್ ಮುಂದುವರಿಯಲಿದೆ. ಮೈಸೂರು ಜಿಲ್ಲೆಯಲ್ಲಿ ಕಠಿಣ ನಿರ್ಬಂಧ ಇರಲಿದೆ.

ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ಸಂಜೆ 5ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ.

ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಈ‌ ಮೊದಲಿನ ಅನ್’ಲಾಕ್ 1.0 ನಿಬಂಧನೆಗಳೇ ಮುಂದುವರಿಯಲಿವೆ. ಅಂದರೆ ಈ 13 ಜಿಲ್ಲೆಗಳಲ್ಲಿ ಲಾಕ್’ಡೌನ್ ಮುಂದುವರಿಯಲಿದೆ. ಈ ಎಲ್ಲಾ ನಿಯಾಮಾವಳಿಗಳು ಜುಲೈ 5ರ ವರೆಗೆ ಅನ್ವಯವಾಗಲಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ ಶನಿವಾರ (ಜೂ.19) ಮಾಹಿತಿ ನೀಡಿದರು.
ಎಸಿ ಬಳಸದೆ ಹೋಟೆಲ್ ಗಳಲ್ಲಿ ಕುಳಿತು ತಿನ್ನಲು ಅವಕಾಶ ನೀಡಲಾಗಿದ್ದು, ಶೇ. 50ರಷ್ಟು ಜನರಿಗೆ ಅವಕಾಶ ನೀಡಲಾಗಿದೆ. ಜಿಮ್, ಬಟ್ಟೆ ಅಂಗಡಿ , ಮೊಬೈಲ್ ಶಾಪ್ , ಜ್ಯುವೆಲರಿ ಶಾಪ್ , ಬೈಕ್ ,ಕಾರ್ ಶೋರೂಮ್ ,  ಎಲೆಕ್ಟ್ರಿಕ್ ಶಾಪ್ಗಳಿಗೆ ಅವಕಾಶ ನೀಡಲಾಗಿದೆ. ಬಾರ್ ಗಳಿಗೆ ಸಂಜೆ 5ಗಂಟೆವರೆಗೆ ಅವಕಾಶ ನೀಡಲಾಗಿದೆ. 

ಶೇ.10ಕ್ಕಿಂತ ಪಾಸಿಟಿವಿಟಿ ಹೆಚ್ಚಿರುವ ಮೈಸೂರು ಜಿಲ್ಲೆಯಲ್ಲಿ ಲಾಕ್’ಡೌನ್ ಮುಂದುವರಿಯಲಿದೆ.

 

‘ನೋಕ್ಕು ವಿದ್ಯೆ’ ಕಲೆಯ ಜೀವಂತಿಕೆಗೆ ಶ್ರಮಿಸುತ್ತಿರುವ ಕೇರಳದ ಯುವತಿ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!