newsics.com
ಮಂಡ್ಯ/ ಚಿಕ್ಕಮಗಳೂರು: ವಿವಾದಾತ್ಮಕ ವಿಡಿಯೋ ಬಿಡುಗಡೆ ಮಾಡಿದ್ದ ಹಿನ್ನೆಲೆಯಲ್ಲಿ ಕಾಳಿ ಮಠದ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಬೆಳಗಿನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದೊಯ್ಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ ಸ್ವಾಮೀಜಿ ಸೋಮವಾರ ವಿವಾದಾತ್ಮಕ ವಿಡಿಯೋ ಬಿಡುಗಡೆ ಮಾಡಿದ್ದರು.
ಸಮಾಜದಲ್ಲಿ ಕೋಮು ಸೌಹಾರ್ದಕ್ಕೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ. ಶ್ರೀರಂಗಪಟ್ಟಣದ ದೇವಾಲಯವನ್ನು ಕೆಡವಿ ಮಸೀದಿ ಮಾಡಿದ್ದಾರೆ. ಆದಷ್ಟು ಬೇಗ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕೆಂದು ರಿಷಿ ಕುಮಾರ್ ಸ್ವಾಮೀಜಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ದೇಶದಲ್ಲಿ 2,38,018 ಮಂದಿಗೆ ಕೊರೋನಾ, 1,57,421 ಸೋಂಕಿತರು ಚೇತರಿಕೆ, 310 ಜನ ಸಾವು