ಬೆಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಭಾಸ್ಕರ ರಾವ್ ತಿಳಿಸಿದ್ದಾರೆ.
ಇನ್ನು ಮುಂದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ಹಾಗೂ ಪರವಾಗಿ ಪ್ರತಿಭಟನೆ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಸ್ಪಷ್ಟಪಡಿಸಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ನಿಯಮ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದು ಭಾಸ್ಕರರಾವ್ ಎಚ್ಚರಿಕೆ ನೀಡಿದ್ದಾರೆ.