NEWSICS.COM
ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಪ್ರತೀ ವರ್ಷ ನಡೆಸುತ್ತಿದ್ದ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.
ಕೋವಿಡ್ -19 ಕಾರಣದಿಂದಾಗಿ ಸಾವಿರಾರು ಜನ ಸೇರುವ ಈ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಮತ್ತು ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಇಲಾಖೆ ಇದೇ ಮೊದಲ ಬಾರಿಗೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.