ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಇವು ಅಂತರ್ಜಾಲದಲ್ಲಿ ಲಭ್ಯವಿರಲಿದೆ. www.kannadapustakapradhikara.com