NEWSICS.COM
ಚಿತ್ರದುರ್ಗ: ಕೆಎಸ್’ಆರ್’ಟಿಸಿ ಬಸ್ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ಐವರು ಮೃತಪಟ್ಟು 7 ಜನ ಗಾಯಗೊಂಡ ಘಟನೆ ನಡೆದಿದೆ. ಚಿತ್ರದುರ್ಗದ ಬಿಜಿಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 3ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದೆ.
ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19) ದುರ್ಗಪ್ಪ(16) ಮತ್ತು 55ವರ್ಷದ ವ್ಯಕ್ತಿ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು,. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆಲಸ ಹುಡುಕಿಕೊಂಡು ಲಿಂಗಸೂರಿನಿಂದ ಬೆಂಗಳೂರಿಗೆ ಹೋಗುವಾಗ ದುರಂತ ಸಂಭವಿಸಿದೆ ಎನ್ನಲಾಗಿದೆ.