ಬೆಳಗಾವಿ: ಇಲ್ಲಿಗೆ ಸಮೀಪದ ಇಟಗಿ – ಬೇಗೂರು ಮಧ್ಯೆ ಟ್ರ್ಯಾಕ್ಟರ್ ರೊಂದು ಸೇತುವೆಯಿಂದ ಮಗುಚಿ ಬಿದ್ದು ಏಳು ಮಂದಿ ರೈತರು ಸಾವನ್ನಪ್ಪಿದ್ದಾರೆ. ಕಬ್ಬು ಕಟಾವಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ನಾಲ್ಕು ಮಂದಿ ಸ್ಥಳದಲ್ಲಿಯೇ ಮೃತಪಟ್ಟರೇ ಉಳಿದ ಮೂವರು ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಪ್ರಾಣ ಕಳೆದುಕೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.