Saturday, November 26, 2022

ನಟ ಸಂಚಾರಿ ವಿಜಯ್’ಗೆ ಅಪಘಾತ: ಸ್ಥಿತಿ ಗಂಭೀರ

Follow Us

newsics.com
ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಸ್ನೇಹಿತರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ತಲೆ ಹಾಗೂ ತೊಡೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.
ನಿನ್ನೆ (ಜೂನ್ 12) ರಾತ್ರಿ ಅಪಘಾತ ಸಂಭವಿಸಿದ್ದು, ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ ಅವರಿಗೆ ಮೆದುಳಿನ ಆಪರೇಷನ್ ಮಾಡಲಾಗಿದೆ. ತೊಡೆ ಮೂಳೆಯ ಶಸ್ತ್ರ ಚಿಕಿತ್ಸೆ ನಡೆಸಬೇಕಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಮುಂದಿನ 48 ಗಂಟೆಗಳು ಅತ್ಯಂತ ಮುಖ್ಯ ಎಂದು ನ್ಯೂರೋ ಸರ್ಜನ್ ಡಾ. ಅನಿಲ್ ಕುಮಾರ್ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುದುರೆ ಜತೆ ರೇಸ್’ಗಿಳಿದ ಧೋನಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!