Tuesday, April 13, 2021

ಬಂಡೆ ಸ್ಫೋಟ; ಪ್ರಾಣಾಪಾಯದಿಂದ ಸಚಿವ ನಾರಾಯಣಗೌಡ ಪಾರು

ಮಂಡ್ಯ: ತೋಟಗಾರಿಕಾ ಸಚಿವ ಕೆ.ಸಿ. ನಾರಾಯಣಗೌಡ ಭಾನುವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಗಮಂಗಲದ ಬಂಕಾಪುರ ಸಮೀಪ ರಸ್ತೆ ಕಾಮಗಾರಿ ವೇಳೆ ಬಂಡೆ ಸಿಡಿಸಿದ್ದರಿಂದ ಅಲ್ಲೇ ಸಾಗುತ್ತಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಸಚಿವ ನಾರಾಯಣಗೌಡರು ಭಾನುವಾರ ರಸ್ತೆ ಮಾರ್ಗವಾಗಿ ಕೆ.ಆರ್.ಪೇಟೆಗೆ ತೆರಳುತ್ತಿದ್ದರು. ಬಂಕಾಪುರದ ಬಳಿ ಸಚಿವರ ಕಾರಿನ ಮುಂದೆಯೇ ಬಂಡೆ ಸಿಡಿದುಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸ್ಫೋಟಕ್ಕೂ ಮುನ್ನ ರಸ್ತೆ ಸಂಚಾರ ಬಂದ್ ಮಾಡದೆ, ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೆ ಬಂಡೆಯನ್ನು ಸ್ಫೋಟಿಸಿ ಬೇಜವಾಬ್ದಾರಿ ತೋರಿದ ಗುತ್ತಿಗೆದಾರನ ವಿರುದ್ಧ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಗುತ್ತಿಗೆದಾರ ಮೈಸೂರಿನ ಶ್ರೀನಿವಾಸ್ ರಾಜ್ ಅವರನ್ನು ವಶಕ್ಕೆ ಪಡೆಯುವಂತೆ ಸಚಿವ ನಾರಾಯಣಗೌಡರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಶ್ರೀನಿವಾಸ್ ರಾಜ್ ಅವರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!