newsics.com
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಅಷ್ಟೇ ಅಲ್ಲ, ಕೈದಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಿದ ಆರೋಪವೂ ಕೇಳಿಬಂದಿದೆ.
ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ಗೃಹಸಚಿವ ಆರಗ ಜ್ಞಾನೇಂದ್ರ ತನಿಖೆಗೆ ಆದೇಶಿಸಿದ್ದಾರೆ. ವಿಡಿಯೋದಲ್ಲಿ ಕೆಲವು ಹಿರಿಯ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದು ಹಗರಣಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಕೈದಿಗಳಿಗೆ ಇಂತಿಷ್ಟೇ ಪ್ರಮಾಣದಲ್ಲಿ ಆಹಾರ ಪದಾರ್ಥ ಬಳಸಿ ಅಡುಗೆ ತಯಾರಿಸಬೇಕು. ಆದರೆ, ಆಹಾರ ಸಾಮಗ್ರಿ ಹಾಗೂ ಉಪಯೋಗಿಸುವ ಪದಾರ್ಥಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗುತ್ತಿದೆ.
ಕಾರಾಗೃಹಗಳ ಡಿಜಿಪಿ ಅಲೋಕ್ ಮೋಹನ್ ಈ ಬಗ್ಗೆ ಪ್ರತಿಕಿಯಿಸಿ, ವೈರಲ್ ವಿಡಿಯೋ ವಿಚಾರವಾಗಿ ಗೃಹ ಸಚಿವರು ಈಗಾಗಲೇ ತನಿಖೆಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ಮಾಡಲಾಗುವುದು ಎಂದಿದ್ದಾರೆ.
ಈ ಹಿಂದೆ ತಮಿಳುನಾಡಿನ ವಿ.ಶಶಿಕಲಾ ಅವರಿಗೂ ಜೈಲಿನಲ್ಲಿದ್ದಾಗ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪ ಸಾಬೀತಾಗಿತ್ತು.