newsics.com
ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಉದ್ಘಾಟಿಸಿದರು. ತಾಯಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹೋತ್ಸವಕ್ಕೆ ಎಸ್ ಎಂ ಕೃಷ್ಣ ಅವರು ಚಾಲನೆ ನೀಡಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ ಎಂ ಕೃಷ್ಣ ಅವರು, ದಸರಾದ ಚಾರಿತ್ರಿಕ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು. ಬಾಲ್ಯದ ನೆನಪನ್ನು ಬಿಚ್ಚಿಟ್ಟರು.
ಮೈಸೂರು ಜತೆ ಬೆಳೆದು ಬಂದ ರೀತಿಯನ್ನು ವಿವರಿಸಿದರು. ರಾಜ್ಯದಲ್ಲಿ ಮೈಸೂರು ದಸರಾವನ್ನು ಹಿನ್ನೆಲೆಯಾಗಿಟ್ಟುಕೊಂಡು ಪ್ರವಾಸೋದ್ಯಮ ಪ್ಯಾಕೇಜ್ ಸಿದ್ಧಪಡಿಸಬೇಕು ಎಂದು ಕೃಷ್ಣ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.