ಬೆಂಗಳೂರು; ಫುಲ್ವಾಮಾ ಉಗ್ರರ ದಾಳಿಯಲ್ಲಿ ದಾಳಿಯಲ್ಲಿ ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಹೆಚ್. ಗುರು ಎಂಬ ವೀರ ಯೋಧ ಹುತಾತ್ಮರಾಗಿ ವರ್ಷ ಕಳೆದರೂ ಅವರ ಚಿತಾಭಸ್ಮ ವಿಸರ್ಜನೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಒಂದು ವರ್ಷ ಕಳೆದರೂ ಚಿತಾಭಸ್ಮ ವಿಸರ್ಜಿಸದೆ, ಅವರ ಸ್ಮಾರಕವನ್ನೂ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ದುರದೃಷ್ಟಕರ. ಯವ ಕಾರಣಕ್ಕೆ ಚಿತಾಭಸ್ಮ ವಿಸರ್ಜನೆ ಮಾಡಿಲ್ಲ ಎಂಬುದನ್ನು ಪತ್ತೆ ಮಾಡಬೇಕು. ಅವರಿಗೆ ತಕ್ಷಣ ಸ್ಮಾರಕ ನಿರ್ಮಿಸಬೇಕು ಎಂದು ಎಸ್.ಎಂ.ಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.