Saturday, November 26, 2022

ಮಣ್ಣಲ್ಲಿ ಮಣ್ಣಾದ ‘ಸಂಚಾರಿ’

Follow Us

newsics.com
ಚಿಕ್ಕಮಗಳೂರು: ಅದ್ಭುತ ನಟನೆಯ‌ ಮೂಲಕ‌ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಇನ್ನು ನೆನಪು‌ ಮಾತ್ರ.
ಬೈಕ್ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್’ ಅಂತ್ಯಸಂಸ್ಕಾರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆಯಿತು.
ವಿಜಯ್ ಗೆಳೆಯ ರಘು ಅವರ ತೋಟದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಮಂಗಳವಾರ (ಜೂ.15) ಅಂತ್ಯಸಂಸ್ಕಾರ ನಡೆದಿದೆ.
ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ವಿಜಯ್ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರು, ಗ್ರಾಮದ ಜನ ಅಂತಿಮ ದರ್ಶನ ಪಡೆದರು.
ಜೂ.12ರ ರಾತ್ರಿ ನಡೆದ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್(38) ತಮ್ಮ ವಿಭಿನ್ನ ಅಭಿನಯದ ಮೂಲಕ ಚಂದನವನ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು.
‘ನಾನವನಲ್ಲ ಅವಳು’ ಚಿತ್ರದ ಮೂಲಕ 28 ವರ್ಷಗಳ ಬಳಿಕ ರಾಷ್ಟ್ರಪ್ರಶಸ್ತಿಯನ್ನು ತಂದುಕೊಟ್ಟ ಕನ್ನಡದ ಹೆಮ್ಮೆಯ ನಟ ವಿಜಯ್.
ಅಂಗಾಂಗ ಕಸಿ ಕಾರ್ಯದ ಬಳಿಕ ಮಂಗಳವಾರ ಬೆಳಗ್ಗೆ ವಿಜಯ್ ಮೃತದೇಹವನ್ನು ಅವರ ಬಂಧುಗಳಿಗೆ ಆಸ್ಪತ್ರೆ ಹಸ್ತಾಂತರಿಸಿತು. ಬಳಿಕ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು.
ನಂತರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!