Wednesday, November 29, 2023

ಸ್ಯಾಂಡಲ್‍ವುಡ್‍ ಡ್ರಗ್ಸ್ ಕೇಸ್; ಅಕುಲ್ ಸೇರಿ ಮೂವರಿಗೆ ಸಿಸಿಬಿ ನೋಟಿಸ್

Follow Us

newsics.com
ಬೆಂಗಳೂರು: ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ ಬಾಲಾಜಿ, ಆರ್.ವಿ. ಯುವರಾಜ್ ಸೇರಿ ಮೂವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು. ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಮಾಜಿ ಶಾಸಕ ಆರ್​.ವಿ. ದೇವರಾಜ್​ ಪುತ್ರ ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.
ನಾಳೆ (ಸೆ.19) ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಡ್ರಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 12 ಮಂದಿಯನ್ನು ಬಂಧಿಸಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ಸೇರಿದಂತೆ ಹಲವರು ಬಂಧನಕ್ಕೆ ಒಳಗಾಗಿ, ವಿಚಾರಣೆ ನಂತರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸ್ಯಾಂಡಲ್‍ವುಡ್‍ನ ತಾರಾ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ. ಈ ದಂಪತಿಯನ್ನು ಮತ್ತೊಂದು ಸುತ್ತಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!