ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ನಟಿ ಸಂಜನಾ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಲಾಗಿದೆ. ಎನ್ ಡಿ ಪಿ ಎಸ್ ನ್ಯಾಯಾಲಯ ವಿಚಾರಣೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸುವಂತೆ ಕೂಡ ಸಿಸಿಬಿಗೆ ನೋಟಿಸ್ ನೀಡಿದೆ.
ನಾಳೆ ನಟಿ ರಾಗಿಣಿ ಅವರ ಜಾಮೀನು ಅರ್ಜಿ ಕುರಿತ ವಿಚಾರಣೆ ಕೂಡ ನಡೆಯಲಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಮಾಗಡಿ ರೋಡ್ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಓರ್ವ ವಿದೇಶಿ ಪ್ರಜೆಯಾಗಿದ್ದಾನೆ. ಎರಡು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ