newsics.com
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ ಶಾಲೆಗಳು ಪುನರಾರಂಭವಾಗಲಿದೆ. ಮೈಸೂರು, ಬೆಳಗಾವಿ ಸೇರಿದಂತೆ ಈ ಹಿಂದೆ ರಜೆ ಘೋಷಿಸಲಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳು ಎಂದಿನಂತೆ ಇರಲಿವೆ.
ಶಾಲೆಗಳಲ್ಲಿ ರಜೆ ಘೋಷಣೆ ಸಂಬಂಧ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಹೆಚ್ಚಿನ ಪ್ರಕರಣ ವರದಿಯಾದರೆ ಒಂದು ವಾರ ಶಾಲೆ ಮುಚ್ಚಲು ಸೂಚಿಸಲಾಗಿದೆ.
ಶಾಲೆಗಳಲ್ಲಿ ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ