Newsics.com
ಬೆಂಗಳೂರು: ರಾಜ್ಯದಲ್ಲಿ ಶಾಲೆ ಪುನರಾರಂಭ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದಿನಿಂದ ಸರಣಿ ಸಭೆ ನಡೆಸಲಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಅವರು ಸಮಾಲೋಚನೆ ನಡೆಸಲಿದ್ದಾರೆ. ಶಾಲೆ ಪುನರಾರಂಭ ಕುರಿತಂತೆ ಪರಿಣಿತರ ಸಮಿತಿ ಕೂಡ ತನ್ನ ವರದಿ ಸಲ್ಲಿಸಿದೆ.
ರಾಜ್ಯದಲ್ಲಿ ಕೊರೋನಾ ಹಾವಳಿ ತಗ್ಗಿದೆ. ಇದರಿಂದ ಸೂಕ್ತ ಮುನ್ನೆಚ್ಚರಿಕೆ ಜತೆ ಶಾಲೆ ಪುನರಾರಂಭಿಸುವುದು ಸೂಕ್ತ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ. ಎಲ್ಲವೂ ಸುಸೂತ್ರವಾಗಿ ನಡೆದರೆ ಡಿಸೆಂಬರ್ ಮೊದಲ ವಾರದಲ್ಲಿ ಶಾಲೆ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ.
ಶಾಲೆ ಪುನರಾರಂಭ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜನಪ್ರತಿನಿಧಿಗಳ ಅಭಿಪ್ರಾಯ ಕೂಡ ಪಡೆದುಕೊಂಡಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯಕ್ಕೆ ಶಾಲೆ ಆರಂಭ ಅಗತ್ಯ ಇಲ್ಲ ಎಂಬ ಅಭಿಪ್ರಾಯ ಹೊಂದಿದ್ದಾರೆ.