ಕೊಚ್ಚಿ: ಕೇರಳದಲ್ಲಿ ಕೋವಿದ್ ಸೋಂಕಿಗೆ ಗುರಿಯಾಗಿದ್ದ ಮೂವರು ವಿದ್ಯಾರ್ಥಿಗಳ ಪೈಕಿ ಮತ್ತೋರ್ವ ವ್ಯಕ್ತಿ ಕೂಡ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರಿಗೆ ಕಾಸರಗೋಡು ಜಿಲ್ಲೆಯ ಕನ್ಹಗಡ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದ ಎರಡು ಪರೀಕ್ಷೆಗಳಲ್ಲಿ ಸೋಂಕಿನ ಲಕ್ಷಣಗಳು ಪತ್ತೆಯಾಗದ್ದರಿಂದ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಚೀನಾದ ವುಹಾನ್ ನಿಂದ ಆಗಮಿಸಿದ್ದ ಮೂವರು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನಡೆಸಲಾಗುತ್ತಿತ್ತು.