newsics.com
ಬೆಂಗಳೂರು: ರಂಗಭೂಮಿ, ಕಿರುತೆರೆ, ಚಲನಚಿತ್ರರಂಗದ ಹಿರಿಯ ಕಲಾವಿದ ಹೆಚ್.ಜಿ.ಸೋಮಶೇಖರ್ ರಾವ್ (ಸೋಮಣ್ಣ) (86) ಅವರು ಇಂದು(ನ.3) ಮಧ್ಯಾಹ್ನ 12.30 ವಿಧಿವಶರಾದರು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಸೋಮಶೇಖರ್ ಅವರು ಹಿರಿಯ ನಟ ದತ್ತಣ್ಣ (ಎಚ್.ಜಿ.ದತ್ತಾತ್ರೇಯ) ಅವರ ಹಿರಿಯ ಸಹೋದರರು.
ಅವರ ಪಾರ್ಥಿವ ಶರೀರವನ್ನು ಶ್ರೀನಗರ ಬಸ್ ಸ್ಟಾಪ್ ಹತ್ತಿರದ ಅವರ ಮನೆಗೆ ತರಲಾಗುತ್ತಿದ್ದು, ಮನೆಯಲ್ಲಿಯೇ ಕೆಲ ಕಾಲ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರ್ ಅವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಅವರು 1981ರಲ್ಲಿ ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ ಚಿತ್ರರಂಗವನ್ನು ಪ್ರವೇಶಿಸಿದರು. ಖ್ಯಾತ ನಟ ಅನಿಲ್ ಠಕ್ಕರ್ ಅವರ ಪ್ರತಿದ್ವಂದಿಯಾಗಿ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದರು. ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ ಅವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತ್ತು. ರವಿಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ಆವರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತ್ತು. ಕೆನರಾ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ನಿವೃತ್ತಿ ಹೊಂದಿದ ಬಳಿಕ ಕನ್ನಡ ರಂಗಭೂಮಿಯಲ್ಲೇ ತಮ್ಮನ್ನು ತೊಡಗಿಸಿಕೊಂಡಿದ್ದರು. ಸೋಮಶೇಖರ ಅವರ ಬದುಕಿನ ಅನುಭವ ಕಥನ ಪ್ರಕಟವಾಗಿದೆ.
ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟ; 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಯುಎಸ್ ನಲ್ಲಿ ಹೈದ್ರಾಬಾದ್ ಮೂಲದ ವ್ಯಕ್ತಿಯ ಹತ್ಯೆ
ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೆ: ಅಮಿರ್ ಖಾನ್ ಪುತ್ರಿ ಬಹಿರಂಗ