Wednesday, July 6, 2022

ಹಿರಿಯ ರಂಗಕರ್ಮಿ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ

Follow Us

ಬಳ್ಳಾರಿ: ಖ್ಯಾತ ಹಿರಿಯ ರಂಗಕರ್ಮಿ ಹಾಗೂ ಗಾಯಕಿ ಸುಭದ್ರಮ್ಮ ಮನ್ಸೂರ್ (81) ಅವರು ಬುಧವಾರ (ಜುಲೈ 15) ತಡರಾತ್ರಿ ನಿಧನರಾದರು.
ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಸುಭದ್ರಮ್ಮ, ಬಳ್ಳಾರಿ ಕೌಲ್ ಬಜಾರ್ ನ ರೇಡಿಯೋ ಪಾರ್ಕ್ ಬಳಿಯಿರುವ ತಮ್ಮ ಸ್ವಗೃಹದಲ್ಲಿ ಬುಧವಾರ ರಾತ್ರಿ 12.45ಕ್ಕೆ ವಿಧಿವಶರಾದರೆಂದು ಕುಟುಂಬದ ಮೂಲಗಳು ತಿಳಿಸಿವೆ.
12ರ ವಯಸ್ಸಿನಿಂದಲೇ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದ ಸುಭದ್ರಮ್ಮ ಅವರು ಏಣಗಿ ಬಾಳಪ್ಪ ನಾಟಕ ಕಂಪನಿ, ಮಾಸ್ಟರ್ ಹಿರಣ್ಣಯ್ಯ ನಾಟಕ ಕಂಪನಿ, ಬಾಗಲಕೋಟೆ ಬೆನಕಪ್ಪ ನಾಟಕ ಕಂಪನಿ ಸೇರಿದಂತೆ ಹಲವು ಕಂಪನಿಗಳಲ್ಲಿ ಕಲಾಸೇವೆ ಗೈದಿದ್ದರು. ಮಹಾಭಾರತದ ದ್ರೌಪತಿ, ಹೆಮರೆಡ್ಡಿ ಮಲ್ಲಮ್ಮನ ಪಾತ್ರಗಳಲ್ಲಿ ಮಿಂಚಿ ಪ್ರೇಕ್ಷಕರ ಅಭಿಮಾನ ಗಳಿಸಿದ್ದರು.
ಅರ್ಧ ಶತಮಾನದಷ್ಟು ಕಾಲ ನಿರಂತರ ರಂಗಸೇವೆಯಲ್ಲಿ ತೊಡಗಿಕೊಂಡಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಕನ್ನಡ ವಿಶ್ವವಿದ್ಯಾಲಯ ವತಿಯಿಂದ ನಾಡೋಜ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ಚಿಂದೋಡಿಲೀಲಾ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುನಸ್ಕಾರಗಳಿಗೆ ಭಾಜನರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಗುರುವಾರ (ಜುಲೈ 16) ಮಧ್ಯಾಹ್ನ 3.30ಕ್ಕೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!