newsics.com
ಬೆಂಗಳೂರು: ಹಿರಿಯ ನಿರ್ಮಾಪಕ ಬಿ ವಿಜಯ ಕುಮಾರ್ ನಿಧನಹೊಂದಿದ್ದಾರೆ. ಸಿಂಹಾದ್ರಿಯ ಸಿಂಹ ಸೇರಿದಂತೆ ಹಲವು ಜನಪ್ರಿಯ ಸಿನೆಮಾಗಳನ್ನು ಅವರು ನಿರ್ಮಿಸಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು. ಹೃದಯಾಘಾತದಿಂದ ವಿಜಯ ಕುಮಾರ್ ಮೃತಪಟ್ಟಿದ್ದಾರೆ.
ಕೊರೋನಾ ಕಾರಣದಿಂದಾಗಿ ಆಪ್ತರಿಗಷ್ಟೇ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಜಯ ಕುಮಾರ್ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ