Tuesday, May 24, 2022

ಹಿರಿಯ ಪತ್ರಕರ್ತ, ರಂಗಭೂಮಿ ಕಲಾವಿದ ನಾಗರಾಜ್ ದೀಕ್ಷಿತ್ ನಿಧನ

Follow Us

newsics.com
ಬೆಂಗಳೂರು: ಹಿರಿಯ ಪತ್ರಕರ್ತ, ರಂಗಭೂಮಿ ಕಲಾವಿದ ನಾಗರಾಜ್ ದೀಕ್ಷಿತ್ (56) ಅವರು ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನರಾದರು.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಪೀಡಿತರಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇತ್ತೀಚೆಗೆ ಅವರ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಆದರೆ, ಗುರುವಾರ ತಡರಾತ್ರಿ ಬಹು ಅಂಗಾಂಗ ವೈಫಲ್ಯ, ಹೃದಯಾಘಾತಕ್ಕೀಡಾಗಿ ನಿಧನರಾದರು. ಗುರುವಾರ ರಾತ್ರಿ ತೀವ್ರ ಅಸ್ವಸ್ಥರಾಗಿದ್ದು, ಹಲವು ಆಸ್ಪತ್ರೆಗಳು ದೀಕ್ಷಿತ್ ಅವರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದವು ಎಂದು ತಿಳಿದುಬಂದಿದೆ. ಟಿವಿ 9ನಲ್ಲಿ ಹಿರಿಯ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ರಂಗಭೂಮಿಯಲ್ಲೂ ನಟನೆ ಮೂಲಕ ಹಲವು ಹವ್ಯಾಸಿ ರಂಗ ತಂಡಗಳ ಜತೆ ಗುರುತಿಸಿಕೊಂಡಿದ್ದರು. ನಾಗರಾಜ್ ದೀಕ್ಷಿತ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!