Tuesday, March 9, 2021

ಹಿರಿಯ ಸಾಹಿತಿ ನಾ.ಸು. ಭರತನಹಳ್ಳಿ ಇನ್ನಿಲ್ಲ

newsics.com
ಕಾರವಾರ(ಉತ್ತರ ಕನ್ನಡ): ಹಿರಿಯ ಸಾಹಿತಿ, ರಂಗಕರ್ಮಿ, ಪತ್ರಕರ್ತ ನಾ.ಸು. ಭರತನಹಳ್ಳಿ (84) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ(ಡಿ.24) ಶಿರಸಿಯ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ(ಕುಂದರಗಿ)ಯಲ್ಲಿ ವಾಸವಿದ್ದ ಭರತನಹಳ್ಳಿ ಅವರಿಗೆ ಸೊಸೆ, ಮೂವರು ಪುತ್ರಿಯರಿದ್ದಾರೆ. ಕಥೆ, ಕಾದಂಬರಿ, ಕವನ, ಪ್ರವಾಸಿ ಕಥನ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಅಂಕಣ ಬರಹ ಸೇರಿದಂತೆ 26 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಮುನ್ನಡೆ ವಾರಪತ್ರಿಕೆ ಹಾಗೂ ದಿನಪತ್ರಿಕೆಗಳ ಸಂಪಾದಕರಾಗಿದ್ದರು. ಸ್ವರ್ಣವಲ್ಲಿ ಶ್ರೀಗಳ ಮಾರ್ಗದರ್ಶನದ ಸ್ವರ್ಣವಲ್ಲೀ ಪ್ರಭಾ ಸಂಪಾದಕರಾಗಿ 21 ವರ್ಷ ಕಾರ್ಯನಿರ್ವಹಿಸಿದ್ದರು.
ನಾ.ಸು. ಭರತನಹಳ್ಳಿ, ಉತ್ತರ ಕನ್ನಡ ಜಿಲ್ಲೆಯ 14 ನೇ ಸಾಹಿತ್ಯ ಸಮ್ಮೇಳನದಲ್ಲಿ ಹಾಗೂ ಯಲ್ಲಾಪುರ ತಾಲೂಕಿನ ಪ್ರಥಮ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಕೆ.ಶ್ಯಾಮರಾವ್ ದತ್ತಿ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕರ್ನಾಟಕಶ್ರೀ ಪ್ರಶಸ್ತಿ, ಕಾಸರಗೋಡಿನ ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ ಮೊದಲಾದ ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಯುವ ನಿರ್ದೇಶಕ ಭರತ್ ನಿಧನ

ಮತ್ತಷ್ಟು ಸುದ್ದಿಗಳು

Latest News

ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್‌ ಹಾಸನ್‌ ಪಕ್ಷ ಸ್ಪರ್ಧೆ

newsics.com ಚೆನ್ನೈ: ನಟ ಕಮಲ್‌ ಹಾಸನ್‌ ನೇತೃತ್ವದ ಮಕ್ಕಳ್‌ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ...

ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್

newsics.com ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್‌ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್​ ರಾವತ್​ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...

ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...
- Advertisement -
error: Content is protected !!