Sunday, December 5, 2021

ಹಿರಿಯ ಸಾಹಿತಿ ಶ್ರೀನಿವಾಸ ಉಡುಪ ನಿಧನ

Follow Us

ಬೆಂಗಳೂರು: ಖ್ಯಾತ ಸಾಹಿತಿ ಶ್ರೀನಿವಾಸ ಉಡುಪ (84) ನಗರದ ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು.
ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಇಂಗ್ಲೀಷ್ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಎರಡು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ನಿವೃತ್ತ ಪ್ರಾಧ್ಯಾಪಕರಾಗಿದ್ದ ಶ್ರೀನಿವಾಸ ಉಡುಪ ಶಿವಮೊಗ್ಗದ ತೀರ್ಥಹಳ್ಳಿಯ ಮಲ್ಲೇಶ್ವರದವರು.
ಕತೆ, ಕವಿತೆ, ಅಂಕಣ ಬರಹ ಪ್ರಕಟಿಸಿದ್ದ ಶ್ರೀನಿವಾಸ ಉಡುಪರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕಾಂತಾವರ ಕನ್ನಡ ಸಂಘದ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳು ಸಂದಿವೆ. ಲಾಕ್ ಡೌನ್ ಇದ್ದುದರಿಂದ ಮೃತರ ಅಂತಿಮ ದರ್ಶನಕ್ಕೆ ಅವಕಾಶವಿರಲಿಲ್ಲ. ಶನಿವಾರ ಸಂಜೆ ಬನಶಂಕರಿಯ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿಯರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!